ಮಾಹಿತಿ ಇರುವಲ್ಲಿ ಹೋಗಲು

ಪರಿವಿಡಿಗೆ ಹೋಗಲು

ಪ್ರಶ್ನೆ 7

ನಮ್ಮ ಕಾಲದ ಬಗ್ಗೆ ಬೈಬಲ್‌ ಮುಂಚೆನೇ ಏನು ಹೇಳಿದೆ?

“ಒಂದು ದೇಶ ಇನ್ನೊಂದು ದೇಶದ ಮೇಲೆ ಯುದ್ಧಮಾಡುತ್ತೆ . . . ಇವೆಲ್ಲ ಕಷ್ಟಕಾಲದ ಆರಂಭ ಅಷ್ಟೇ.”

ಮತ್ತಾಯ 24:​7, 8

“ಅನೇಕ ಸುಳ್ಳು ಪ್ರವಾದಿಗಳು ಹುಟ್ಟಿಕೊಳ್ತಾರೆ. ಅವರು ತುಂಬ ಜನ್ರನ್ನ ದಾರಿತಪ್ಪಿಸ್ತಾರೆ. ಕೆಟ್ಟತನ ಹೆಚ್ಚಾಗೋದ್ರಿಂದ ತುಂಬ ಜನ್ರ ಪ್ರೀತಿ ತಣ್ಣಗಾಗುತ್ತೆ.”

ಮತ್ತಾಯ 24:​11, 12

“ಯುದ್ಧ ನಡಿಯೋದನ್ನ, ಯುದ್ಧ ಆಗ್ತಾ ಇದೆ ಅನ್ನೋ ಸುದ್ದಿಯನ್ನ ನೀವು ಕೇಳ್ತೀರ. ಆಗ ಭಯಪಡಬೇಡಿ. ಯಾಕಂದ್ರೆ ಅವೆಲ್ಲ ಆಗಲೇಬೇಕು. ಆದ್ರೆ ಅದೇ ಅಂತ್ಯ ಅಲ್ಲ.”

ಮಾರ್ಕ 13:7

“ಒಂದರ ನಂತ್ರ ಇನ್ನೊಂದು ಸ್ಥಳದಲ್ಲಿ ಭೂಕಂಪ ಆಗುತ್ತೆ. ಒಂದಾದ ಮೇಲೆ ಒಂದು ಜಾಗದಲ್ಲಿ ಅಂಟುರೋಗಗಳು, ಆಹಾರದ ಕೊರತೆ ಇರುತ್ತೆ. ಭಯಾನಕ ದೃಶ್ಯಗಳು ಮತ್ತು ಆಕಾಶದಲ್ಲಿ ದೊಡ್ಡದೊಡ್ಡ ಸೂಚನೆಗಳು ಕಾಣಿಸುತ್ತೆ.”

ಲೂಕ 21:11

“ಕೊನೇ ದಿನಗಳಲ್ಲಿ ಪರಿಸ್ಥಿತಿ ತುಂಬ ಹದಗೆಡುತ್ತೆ, ತುಂಬ ಕಷ್ಟ ಪಡಬೇಕಾಗುತ್ತೆ. ಯಾಕಂದ್ರೆ ತಮ್ಮ ಬಗ್ಗೆನೇ ಯೋಚಿಸುವವರು, ಹಣದಾಸೆ ಇರುವವರು, ತಮ್ಮ ಬಗ್ಗೆ ಕೊಚ್ಕೊಳ್ಳುವವರು, ಅಹಂಕಾರಿಗಳು, ಬೈಯೋರು, ಅಪ್ಪಅಮ್ಮನ ಮಾತು ಕೇಳದವರು, ಮಾಡಿದ ಉಪಕಾರ ಮರೆತುಬಿಡುವವರು, ನಂಬಿಕೆದ್ರೋಹ ಮಾಡುವವರು, ಕುಟುಂಬದವ್ರನ್ನ ಪ್ರೀತಿಸದವರು, ಯಾವುದಕ್ಕೂ ಒಪ್ಪದವರು, ಬೇರೆಯವ್ರ ಹೆಸ್ರು ಹಾಳು ಮಾಡುವವರು, ತಮ್ಮನ್ನ ಹತೋಟಿಯಲ್ಲಿ ಇಟ್ಕೊಳ್ಳದವರು, ಉಗ್ರರು, ಒಳ್ಳೇದನ್ನ ದ್ವೇಷಿಸುವವರು, ಮಿತ್ರದ್ರೋಹಿಗಳು, ಹಠಮಾರಿಗಳು, ಜಂಬದಿಂದ ಉಬ್ಬಿದವರು, ದೇವರನ್ನ ಪ್ರೀತಿಸದೆ ತಮ್ಮ ಆಸೆಗಳನ್ನ ತೀರಿಸ್ಕೊಳ್ಳೋಕೆ ಇಷ್ಟಪಡುವವರು, ಮೇಲೆ ದೇವಭಕ್ತಿಯ ವೇಷ ಹಾಕೊಂಡು ಅದಕ್ಕೆ ತಕ್ಕ ಹಾಗೆ ಜೀವನ ಮಾಡದವರು ಇರ್ತಾರೆ.”

2 ತಿಮೊತಿ 3:​1-5